Home Bibles ಅಂಕೆಗಳ ಪುಸ್ತಕ 20:10 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 20:10 · ಕನ್ನಡ ಬೈಬಲ್

ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.

Cross references

ಆದಿಕಾಂಡ 40:8

ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.

ಆದಿಕಾಂಡ 41:16

ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

ಅಂಕೆಗಳ ಪುಸ್ತಕ 11:22

ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.

ಅಂಕೆಗಳ ಪುಸ್ತಕ 20:24

ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.

ದ್ವಿತೀಯೋಪದೇಶಕಾಂಡ 9:24

ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.

ಕೀರ್ತನೆಗಳು 106:32

ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.

ಕೀರ್ತನೆಗಳು 106:33

ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.

ದಾನಿಯೇಲ 2:28

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ಮತ್ತಾಯ 5:22

ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಲೂಕ 9:54

ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.

ಅಪೋಸ್ತಲರ ಕೃತ್ಯಗಳು 3:12

ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?

ಅಪೋಸ್ತಲರ ಕೃತ್ಯಗಳು 14:9

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--

ಅಪೋಸ್ತಲರ ಕೃತ್ಯಗಳು 23:3

ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.

ರೋಮಾಪುರದವರಿಗೆ 15:17

ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.

1 ಕೊರಿಂಥದವರಿಗೆ 3:7

ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.

ಎಫೆಸದವರಿಗೆ 4:26

ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;

ಯಾಕೋಬ 3:2

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

Interlinear

Choose Theme