ಅಂಕೆಗಳ ಪುಸ್ತಕ 20:18 · ಕನ್ನಡ ಬೈಬಲ್
ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
Cross references
ಅಂಕೆಗಳ ಪುಸ್ತಕ 20:20
ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
ಅಂಕೆಗಳ ಪುಸ್ತಕ 21:4
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
ಅಂಕೆಗಳ ಪುಸ್ತಕ 21:23
ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
ದ್ವಿತೀಯೋಪದೇಶಕಾಂಡ 2:29
ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.