Home Bibles ಅಂಕೆಗಳ ಪುಸ್ತಕ 20:26 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 20:26 · ಕನ್ನಡ ಬೈಬಲ್

ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.

Cross references

ನಿರ್ಗಮಕಾಂಡ 29:29

ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.

ಅಂಕೆಗಳ ಪುಸ್ತಕ 20:24

ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.

ಯೆಶಾಯ 22:21

ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.

ಹೆಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ಹೆಬ್ರಿಯರಿಗೆ 7:23

ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;

Interlinear

Choose Theme