ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
Cross references
ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.