ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
Cross references
ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್, ಬೆತ್ಬಾಳ್ಮೆಯೋನ್,
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.