Home Bibles ☰ Books ಅಂಕೆಗಳ ಪುಸ್ತಕ 23:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 23:11 · ಕನ್ನಡ ಬೈಬಲ್

ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.

Cross references

ಅಂಕೆಗಳ ಪುಸ್ತಕ 22:11

ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.

ಅಂಕೆಗಳ ಪುಸ್ತಕ 22:17

ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.

ಅಂಕೆಗಳ ಪುಸ್ತಕ 23:7

ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.

ಅಂಕೆಗಳ ಪುಸ್ತಕ 24:10

ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.

ನೆಹೆಮ್ಯ 13:2

ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್‌ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.

ಕೀರ್ತನೆಗಳು 109:17

ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.

Interlinear

Choose Theme