Home Bibles ಅಂಕೆಗಳ ಪುಸ್ತಕ 26:55 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:55 · ಕನ್ನಡ ಬೈಬಲ್

ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.

Cross references

ಅಂಕೆಗಳ ಪುಸ್ತಕ 26:56

ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.

ಅಂಕೆಗಳ ಪುಸ್ತಕ 33:54

ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.

ಅಂಕೆಗಳ ಪುಸ್ತಕ 34:13

ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.

ಅಂಕೆಗಳ ಪುಸ್ತಕ 36:2

ಇಸ್ರಾಯೇಲ್‌ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್‌ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.

ಯೆಹೋಶುವ 11:23

ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

ಯೆಹೋಶುವ 14:2

ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.

ಯೆಹೋಶುವ 17:14

ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.

ಯೆಹೋಶುವ 18:6

ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.

ಯೆಹೋಶುವ 18:10

ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.

ಯೆಹೋಶುವ 19:1

ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.

ಯೆಹೋಶುವ 19:10

ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.

ಯೆಹೋಶುವ 19:17

ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ

ಯೆಹೋಶುವ 19:24

ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.

ಯೆಹೋಶುವ 19:32

ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

ಯೆಹೋಶುವ 19:40

ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

ಸಾಮೇತಿಗಳು 16:33

ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.

ಸಾಮೇತಿಗಳು 18:18

ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;

ಅಪೋಸ್ತಲರ ಕೃತ್ಯಗಳು 1:26

ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.

ಕೊಲೊಸ್ಸೆಯವರಿಗೆ 1:12

ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.

ಪ್ರಕಟನೆ 7:4

ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.

Interlinear

Choose Theme