Home Bibles ಅಂಕೆಗಳ ಪುಸ್ತಕ 26:59 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 26:59 · ಕನ್ನಡ ಬೈಬಲ್

ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.

Cross references

ನಿರ್ಗಮಕಾಂಡ 2:1

ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.

ನಿರ್ಗಮಕಾಂಡ 2:2

ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.

ನಿರ್ಗಮಕಾಂಡ 2:4

ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.

ನಿರ್ಗಮಕಾಂಡ 6:20

ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.

ನಿರ್ಗಮಕಾಂಡ 15:20

ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.

ಲೇವ್ಯಕಾಂಡ 18:12

ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.

ಅಂಕೆಗಳ ಪುಸ್ತಕ 12:1

ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.

ಅಂಕೆಗಳ ಪುಸ್ತಕ 20:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಜಿನ್‌ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.

Interlinear

Choose Theme