ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
Cross references
ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;