ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
Cross references
ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--
ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.