Home Bibles ಅಂಕೆಗಳ ಪುಸ್ತಕ 3:9 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:9 · ಕನ್ನಡ ಬೈಬಲ್

ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್‌ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.

Cross references

ಅಂಕೆಗಳ ಪುಸ್ತಕ 8:14

ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.

ಅಂಕೆಗಳ ಪುಸ್ತಕ 8:16

ಅವರು ಇಸ್ರಾಯೇಲ್‌ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.

ಅಂಕೆಗಳ ಪುಸ್ತಕ 8:18

ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.

ಅಂಕೆಗಳ ಪುಸ್ತಕ 8:19

ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್‌ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್‌ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್‌ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್‌ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.

ಅಂಕೆಗಳ ಪುಸ್ತಕ 18:2

ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;

ಅಂಕೆಗಳ ಪುಸ್ತಕ 18:6

ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.

1 ದಿನವೃತ್ತಾಂತ 6:33

ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

1 ದಿನವೃತ್ತಾಂತ 15:2

ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.

ಎಜ್ರಾ 2:43

ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ

ಎಜ್ರಾ 6:18

ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.

ಎಜ್ರಾ 8:20

ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.

ಎಫೆಸದವರಿಗೆ 4:8

ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.

ಎಫೆಸದವರಿಗೆ 4:11

ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ

Interlinear

Choose Theme