Home Bibles ಅಂಕೆಗಳ ಪುಸ್ತಕ 31:19 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:19 · ಕನ್ನಡ ಬೈಬಲ್

ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.

Cross references

ಅಂಕೆಗಳ ಪುಸ್ತಕ 5:2

ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು.

ಅಂಕೆಗಳ ಪುಸ್ತಕ 19:11

ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಂಕೆಗಳ ಪುಸ್ತಕ 19:12

ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.

1 ದಿನವೃತ್ತಾಂತ 22:8

ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.

Interlinear

Choose Theme