ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
Cross references
ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.