ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
Cross references
ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
ರಿಮ್ಮೋನ್ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.