Home Bibles ಅಂಕೆಗಳ ಪುಸ್ತಕ 32:12 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:12 · ಕನ್ನಡ ಬೈಬಲ್

ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.

Cross references

ಅಂಕೆಗಳ ಪುಸ್ತಕ 14:22

ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

ಅಂಕೆಗಳ ಪುಸ್ತಕ 14:24

ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

ಅಂಕೆಗಳ ಪುಸ್ತಕ 14:30

ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.

ಅಂಕೆಗಳ ಪುಸ್ತಕ 26:65

ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ದ್ವಿತೀಯೋಪದೇಶಕಾಂಡ 1:36

ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.

ಯೆಹೋಶುವ 14:8

ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.

ಯೆಹೋಶುವ 15:17

ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.

Interlinear

Choose Theme