ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?