ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
Cross references
ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.