ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
Cross references
ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.