ಅಂಕೆಗಳ ಪುಸ್ತಕ 33:2 · ಕನ್ನಡ ಬೈಬಲ್
ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.
Cross references
ಅಂಕೆಗಳ ಪುಸ್ತಕ 9:17
ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
ಅಂಕೆಗಳ ಪುಸ್ತಕ 10:6
ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
ಅಂಕೆಗಳ ಪುಸ್ತಕ 10:13
ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
ದ್ವಿತೀಯೋಪದೇಶಕಾಂಡ 1:2
(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
ದ್ವಿತೀಯೋಪದೇಶಕಾಂಡ 10:11
ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.