ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
Cross references
ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.