ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
Cross references
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.