Home Bibles ಅಂಕೆಗಳ ಪುಸ್ತಕ 34:3 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 34:3 · ಕನ್ನಡ ಬೈಬಲ್

ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್‌ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.

Cross references

ಆದಿಕಾಂಡ 14:3

ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್‌ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.

ನಿರ್ಗಮಕಾಂಡ 23:31

ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.

ಅಂಕೆಗಳ ಪುಸ್ತಕ 13:21

ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.

ಯೆಹೋಶುವ 3:16

ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.

ಯೆಹೋಶುವ 15:1

ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್‌ ಅರಣ್ಯದ ದಕ್ಷಿಣ ಭಾಗವಾಗಿದೆ.

ಯೆಹೆಜ್ಕೇಲ 47:8

ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.

ಯೆಹೆಜ್ಕೇಲ 47:13

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.

ಯೆಹೆಜ್ಕೇಲ 47:18

ಪೂರ್ವದಲ್ಲಿ ಹವ್ರಾನ್‌, ದಮಸ್ಕ, ಗಿಲ್ಯಾದ್‌ ಇವು ಗಳಿಗೂ ಇಸ್ರಾಯೇಲ್‌ ದೇಶಕ್ಕೂ ಮಧ್ಯೆ ಯೊರ್ದನ್‌ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.

Interlinear

Choose Theme