ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
Cross references
ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ