ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
Cross references
ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.