ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
Cross references
ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.