Home Bibles ☰ Books ಅಂಕೆಗಳ ಪುಸ್ತಕ 4:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:6 · ಕನ್ನಡ ಬೈಬಲ್

ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7

Cross references

ನಿರ್ಗಮಕಾಂಡ 25:10

ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.

ನಿರ್ಗಮಕಾಂಡ 25:13

ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,

ನಿರ್ಗಮಕಾಂಡ 35:19

ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.

ನಿರ್ಗಮಕಾಂಡ 39:1

ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.

ನಿರ್ಗಮಕಾಂಡ 39:41

ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.

ಅಂಕೆಗಳ ಪುಸ್ತಕ 4:7

ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.

ಅಂಕೆಗಳ ಪುಸ್ತಕ 4:11

ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.

1 ಅರಸುಗಳು 8:7

ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.

Interlinear

Choose Theme