ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
Cross references
ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?