ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
Cross references
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.