ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
Cross references
ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?