Home Bibles ಅಂಕೆಗಳ ಪುಸ್ತಕ 5:9 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 5:9 · ಕನ್ನಡ ಬೈಬಲ್

ಇದಲ್ಲದೆ ಇಸ್ರಾಯೇಲ್‌ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.

Cross references

ನಿರ್ಗಮಕಾಂಡ 29:28

ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.

ಲೇವ್ಯಕಾಂಡ 6:17

ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.

ಲೇವ್ಯಕಾಂಡ 6:26

ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.

ಲೇವ್ಯಕಾಂಡ 7:6

ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.

ಲೇವ್ಯಕಾಂಡ 10:13

ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.

ಲೇವ್ಯಕಾಂಡ 22:2

ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್‌ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.

ಅಂಕೆಗಳ ಪುಸ್ತಕ 18:8

ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್‌ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.

ಅಂಕೆಗಳ ಪುಸ್ತಕ 18:19

ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.

ದ್ವಿತೀಯೋಪದೇಶಕಾಂಡ 12:26

ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.

ದ್ವಿತೀಯೋಪದೇಶಕಾಂಡ 18:3

ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.

ಯೆಹೆಜ್ಕೇಲ 44:29

ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಮಲಾಕಿ 3:8

ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

1 ಕೊರಿಂಥದವರಿಗೆ 9:7

ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?

Interlinear

Choose Theme