ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
Cross references
ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.