Numbers
Chapter 7
ಕನ್ನಡ ಬೈಬಲ್1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
2ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
3ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
4ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ
5ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
6ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
7ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
8ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
11ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
14ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
15ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
16ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
17ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
18ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
20ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
21ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
22ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
23ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
24ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
25ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
26ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
27ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
28ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
29ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.
30ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.
31ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
32ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
33ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
34ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
35ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.
36ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.
37ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
38ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
39ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
40ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
41ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
42ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
43ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
44ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
45ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
46ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
47ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.
48ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
49ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
50ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
51ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
52ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
53ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.
54ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
55ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
56ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
57ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
58ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
59ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.
60ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
61ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
62ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
63ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
64ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
65ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.
66ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
67ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
68ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
69ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
70ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
71ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
72ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
73ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
74ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
75ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
76ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
77ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.
78ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.
79ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
80ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
81ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
82ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
83ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
84ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
85ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
87ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
88ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
89ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
Bible Study with Steffi App
Download Free ↗
Memorize verses with spaced repetition. Free, no ads, 15+ languages.