Home Bibles ಅಂಕೆಗಳ ಪುಸ್ತಕ 7:84 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:84 · ಕನ್ನಡ ಬೈಬಲ್

ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.

Cross references

ಅಂಕೆಗಳ ಪುಸ್ತಕ 7:1

ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--

ಅಂಕೆಗಳ ಪುಸ್ತಕ 7:10

ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.

1 ದಿನವೃತ್ತಾಂತ 29:6

ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು

ಎಜ್ರಾ 2:68

ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

ನೆಹೆಮ್ಯ 7:70

ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.

ಯೆಶಾಯ 60:6

ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.

ಹೆಬ್ರಿಯರಿಗೆ 13:10

ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.

ಪ್ರಕಟನೆ 21:14

ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

Interlinear

Choose Theme