ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
Cross references
ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.