Home Bibles ಅಂಕೆಗಳ ಪುಸ್ತಕ 8:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 8:15 · ಕನ್ನಡ ಬೈಬಲ್

ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.

Cross references

ನಿರ್ಗಮಕಾಂಡ 29:24

ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.

ಅಂಕೆಗಳ ಪುಸ್ತಕ 3:12

ನಾನು ಇಗೋ, ನಾನೇ ಇಸ್ರಾ ಯೇಲ್‌ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.

ಅಂಕೆಗಳ ಪುಸ್ತಕ 3:23

ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.

ಅಂಕೆಗಳ ಪುಸ್ತಕ 4:3

ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.

ಅಂಕೆಗಳ ಪುಸ್ತಕ 8:11

ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.

ಅಂಕೆಗಳ ಪುಸ್ತಕ 8:13

ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.

1 ದಿನವೃತ್ತಾಂತ 23:1

ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.

1 ದಿನವೃತ್ತಾಂತ 25:1

ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.

Interlinear

Choose Theme