Home Bibles ಅಂಕೆಗಳ ಪುಸ್ತಕ 8:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 8:20 · ಕನ್ನಡ ಬೈಬಲ್

ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್‌ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.

Cross references

ನಿರ್ಗಮಕಾಂಡ 12:50

ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.

ಅಂಕೆಗಳ ಪುಸ್ತಕ 1:50

ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.

ಅಂಕೆಗಳ ಪುಸ್ತಕ 1:54

ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

ಅಂಕೆಗಳ ಪುಸ್ತಕ 9:5

ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿದರು.

ಅಂಕೆಗಳ ಪುಸ್ತಕ 9:22

ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್‌ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.

Interlinear

Choose Theme