Home Bibles ಅಂಕೆಗಳ ಪುಸ್ತಕ 8:24 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 8:24 · ಕನ್ನಡ ಬೈಬಲ್

ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.

Cross references

ಅಂಕೆಗಳ ಪುಸ್ತಕ 1:53

ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

ಅಂಕೆಗಳ ಪುಸ್ತಕ 4:3

ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.

ಅಂಕೆಗಳ ಪುಸ್ತಕ 4:23

ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.

1 ದಿನವೃತ್ತಾಂತ 23:3

ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.

1 ದಿನವೃತ್ತಾಂತ 23:24

ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.

1 ದಿನವೃತ್ತಾಂತ 28:12

ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.

2 ದಿನವೃತ್ತಾಂತ 31:17

ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ

1 ಕೊರಿಂಥದವರಿಗೆ 9:7

ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?

2 ಕೊರಿಂಥದವರಿಗೆ 10:4

(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).

1 ತಿಮೋಥೆಯ 1:18

ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.

1 ತಿಮೋಥೆಯ 6:12

ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

2 ತಿಮೋಥೆಯ 2:3

ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.

Interlinear

Choose Theme