ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
Cross references
ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.