Home Bibles ಅಂಕೆಗಳ ಪುಸ್ತಕ 9:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 9:6 · ಕನ್ನಡ ಬೈಬಲ್

ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.

Cross references

ನಿರ್ಗಮಕಾಂಡ 18:15

ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

ನಿರ್ಗಮಕಾಂಡ 18:19

ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.

ನಿರ್ಗಮಕಾಂಡ 18:26

ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.

ಲೇವ್ಯಕಾಂಡ 21:11

ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.

ಲೇವ್ಯಕಾಂಡ 24:11

ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).

ಅಂಕೆಗಳ ಪುಸ್ತಕ 5:2

ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು.

ಅಂಕೆಗಳ ಪುಸ್ತಕ 6:6

ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.

ಅಂಕೆಗಳ ಪುಸ್ತಕ 15:33

ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು

ಅಂಕೆಗಳ ಪುಸ್ತಕ 19:11

ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಂಕೆಗಳ ಪುಸ್ತಕ 19:14

ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.

ಅಂಕೆಗಳ ಪುಸ್ತಕ 19:16

ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.

ಅಂಕೆಗಳ ಪುಸ್ತಕ 19:18

ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.

ಅಂಕೆಗಳ ಪುಸ್ತಕ 27:2

ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--

ಅಂಕೆಗಳ ಪುಸ್ತಕ 27:5

ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.

ಯೋಹಾನ 18:28

ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

Interlinear

Choose Theme