Home Bibles ಒಬದ್ಯ 1:11 · ಕನ್ನಡ ಬೈಬಲ್
ಒಬದ್ಯ 1:11 · ಕನ್ನಡ ಬೈಬಲ್

ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.

Cross references

2 ಅರಸುಗಳು 24:10

ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.

2 ಅರಸುಗಳು 25:11

ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.

ಕೀರ್ತನೆಗಳು 50:18

ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.

ಕೀರ್ತನೆಗಳು 137:7

ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.

ಯೋವೇಲ 3:3

ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?

ನಹೂಮ 3:10

ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.

ಸೆಫನ್ಯ 2:10

ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ

Interlinear

Choose Theme