Home Bibles ☰ Books ಒಬದ್ಯ 1:20 · ಕನ್ನಡ ಬೈಬಲ್
ಒಬದ್ಯ 1:20 · ಕನ್ನಡ ಬೈಬಲ್

ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್‌ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.

Cross references

1 ಅರಸುಗಳು 17:9

ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.

ಯೆರೆಮಿಯ 3:18

ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.

ಯೆರೆಮಿಯ 13:19

ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!

ಯೆರೆಮಿಯ 33:13

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ

ಯೆಹೆಜ್ಕೇಲ 34:12

ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.

ಯೆಹೆಜ್ಕೇಲ 36:12

ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.

ಹೊಶೇಯ 1:10

ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.

ಆಮೋಸ 9:14

ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಜೆಕರ್ಯ 10:6

ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.

ಲೂಕ 4:26

ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.

Interlinear

Choose Theme