Home Bibles ಫಿಲಿಪ್ಪಿಯವರಿಗೆ 1:14 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 1:14 · ಕನ್ನಡ ಬೈಬಲ್

ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.

Cross references

ಮಾರ್ಕ 3:3

ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.

ಲೂಕ 1:74

ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ

ಲೂಕ 12:5

ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.

ಅಪೋಸ್ತಲರ ಕೃತ್ಯಗಳು 4:23

ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.

2 ಕೊರಿಂಥದವರಿಗೆ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.

ಎಫೆಸದವರಿಗೆ 3:13

ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.

ಎಫೆಸದವರಿಗೆ 6:19

ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಫಿಲಿಪ್ಪಿಯವರಿಗೆ 1:7

ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

ಫಿಲಿಪ್ಪಿಯವರಿಗೆ 4:1

ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.

ಕೊಲೊಸ್ಸೆಯವರಿಗೆ 4:4

ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;

ಕೊಲೊಸ್ಸೆಯವರಿಗೆ 4:7

ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.

1 ತೆಸಲೋನಿಕದವರಿಗೆ 2:2

ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.

Interlinear

Choose Theme