Home Bibles ☰ Books ಫಿಲಿಪ್ಪಿಯವರಿಗೆ 1:7 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 1:7 · ಕನ್ನಡ ಬೈಬಲ್

ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

Cross references

ಅಪೋಸ್ತಲರ ಕೃತ್ಯಗಳು 16:23

ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.

ಅಪೋಸ್ತಲರ ಕೃತ್ಯಗಳು 20:23

ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.

ಅಪೋಸ್ತಲರ ಕೃತ್ಯಗಳು 21:33

ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.

1 ಕೊರಿಂಥದವರಿಗೆ 9:23

ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

1 ಕೊರಿಂಥದವರಿಗೆ 13:7

ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.

2 ಕೊರಿಂಥದವರಿಗೆ 3:2

ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?

2 ಕೊರಿಂಥದವರಿಗೆ 7:3

ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.

ಗಲಾತ್ಯದವರಿಗೆ 5:6

ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಎಫೆಸದವರಿಗೆ 3:1

ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು

ಎಫೆಸದವರಿಗೆ 4:1

ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಎಫೆಸದವರಿಗೆ 6:20

ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

ಫಿಲಿಪ್ಪಿಯವರಿಗೆ 1:5

ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.

ಫಿಲಿಪ್ಪಿಯವರಿಗೆ 1:16

ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.

Interlinear

Choose Theme