Home Bibles ☰ Books ಫಿಲಿಪ್ಪಿಯವರಿಗೆ 3:16 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 3:16 · ಕನ್ನಡ ಬೈಬಲ್

ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.

Cross references

ರೋಮಾಪುರದವರಿಗೆ 12:16

ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

ರೋಮಾಪುರದವರಿಗೆ 15:5

ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.

ಗಲಾತ್ಯದವರಿಗೆ 5:7

ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?

ಗಲಾತ್ಯದವರಿಗೆ 6:16

ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.

ಎಫೆಸದವರಿಗೆ 5:2

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಫಿಲಿಪ್ಪಿಯವರಿಗೆ 1:27

ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ

ಫಿಲಿಪ್ಪಿಯವರಿಗೆ 2:2

ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.

ಫಿಲಿಪ್ಪಿಯವರಿಗೆ 4:2

ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

ಕೊಲೊಸ್ಸೆಯವರಿಗೆ 2:6

ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.

ಹೆಬ್ರಿಯರಿಗೆ 10:38

ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

2 ಪೇತ್ರ 2:10

ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

ಪ್ರಕಟನೆ 2:4

ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.

Interlinear

Choose Theme