Home Bibles ಸಾಮೇತಿಗಳು 1:15 · ಕನ್ನಡ ಬೈಬಲ್
ಸಾಮೇತಿಗಳು 1:15 · ಕನ್ನಡ ಬೈಬಲ್

ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.

Cross references

ಕೀರ್ತನೆಗಳು 1:1

ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ

ಕೀರ್ತನೆಗಳು 26:4

ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.

ಕೀರ್ತನೆಗಳು 119:101

ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.

ಸಾಮೇತಿಗಳು 3:31

ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.

ಸಾಮೇತಿಗಳು 4:14

ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.

ಸಾಮೇತಿಗಳು 4:15

ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.

ಸಾಮೇತಿಗಳು 4:27

ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.

ಸಾಮೇತಿಗಳು 5:8

ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.

ಸಾಮೇತಿಗಳು 9:6

ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

ಸಾಮೇತಿಗಳು 13:20

ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಯೆರೆಮಿಯ 14:10

ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.

2 ಕೊರಿಂಥದವರಿಗೆ 6:17

ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

Interlinear

Choose Theme