Home Bibles ಸಾಮೇತಿಗಳು 1:4 · ಕನ್ನಡ ಬೈಬಲ್
ಸಾಮೇತಿಗಳು 1:4 · ಕನ್ನಡ ಬೈಬಲ್

ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.

Cross references

ದ್ವಿತೀಯೋಪದೇಶಕಾಂಡ 4:6

ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.

ಕೀರ್ತನೆಗಳು 19:7

ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಕೀರ್ತನೆಗಳು 34:11

ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

ಕೀರ್ತನೆಗಳು 119:9

ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.

ಕೀರ್ತನೆಗಳು 119:130

ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.

ಸಾಮೇತಿಗಳು 1:22

ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?

ಸಾಮೇತಿಗಳು 2:10

ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.

ಸಾಮೇತಿಗಳು 3:21

ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.

ಸಾಮೇತಿಗಳು 7:7

ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.

ಸಾಮೇತಿಗಳು 8:5

ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.

ಸಾಮೇತಿಗಳು 8:12

ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.

ಸಾಮೇತಿಗಳು 8:17

ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.

ಸಾಮೇತಿಗಳು 8:32

ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ಸಾಮೇತಿಗಳು 9:4

ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--

ಸಭಾಪ್ರಸಂಗಿ 11:9

ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

ಯೆಶಾಯ 35:8

ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

2 ತಿಮೋಥೆಯ 2:22

ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.

ತೀತ 2:6

ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.

Interlinear

Choose Theme