ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
Cross references
ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.