Home Bibles ಸಾಮೇತಿಗಳು 10:11 · ಕನ್ನಡ ಬೈಬಲ್
ಸಾಮೇತಿಗಳು 10:11 · ಕನ್ನಡ ಬೈಬಲ್

ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.

Cross references

ಕೀರ್ತನೆಗಳು 37:30

ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.

ಕೀರ್ತನೆಗಳು 107:42

ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.

ಸಾಮೇತಿಗಳು 10:6

ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.

ಸಾಮೇತಿಗಳು 10:20

ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.

ಸಾಮೇತಿಗಳು 10:32

ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.

ಸಾಮೇತಿಗಳು 13:14

ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.

ಸಾಮೇತಿಗಳು 15:4

ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.

ಸಾಮೇತಿಗಳು 15:7

ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.

ಸಾಮೇತಿಗಳು 16:22

ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.

ಸಾಮೇತಿಗಳು 18:4

ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.

ಸಾಮೇತಿಗಳು 20:15

ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.

ಸಭಾಪ್ರಸಂಗಿ 10:12

ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.

ಮತ್ತಾಯ 12:34

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

ಎಫೆಸದವರಿಗೆ 4:29

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.

ಯಾಕೋಬ 3:5

ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.

Interlinear

Choose Theme