ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
Cross references
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.