ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
Cross references
ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.